Karnataka NMMS 2024-25 Apply 8ನೇ ತರಗತಿ NMMS ಪರೀಕ್ಷೆಗೆ ಅರ್ಜಿ

at

WhatsApp Channel Join Now
Join Arattai Channel Join Now
Telegram Channel Join Now

Karnataka NMMS 2024 Notification: The Karnataka School Examination and Assessment Board has Released the Notification for the NMMS (National Means-cum-Merit Scholarship) Examination for the Academic Year 2024-25.

2024-25ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನ (National Means cum- Merit Scholarship- NMMS) og ve-1 Department of School Education & Literacy ನವದೆಹಲಿ ರವರ ಮಾರ್ಗಸೂಚಿಯಂತೆ ನಡೆಸಲು Online ಮೂಲಕ ಅರ್ಜಿ ಆಹ್ವಾನಿಸಲಾಗಿರುತ್ತದೆ. ಸದರಿ ಪರೀಕ್ಷೆಯನ್ನು 2024-25ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ (Local body schools) ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ದಿನಾಂಕ:08.12.2024 ರಂದು ನಡೆಸಲಾಗುವುದು. ಅದರಂತೆ NMMS ಪರೀಕ್ಷೆಗೆ Online ಮೂಲಕ ಅರ್ಜಿಯನ್ನು ದಿನಾಂಕ:19.08.2024 ರಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ವೆಬ್‌ಸೈಟ್‌ನ NMMS ಲಾಗಿನ್‌ನಲ್ಲಿ ಲಭ್ಯ ಮಾಡಲಾಗುವುದು. ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರು ತಮ್ಮ ಶಾಲಾ ವಿದ್ಯಾರ್ಥಿಗಳ ಅರ್ಜಿಗಳನ್ನು ಕಡ್ಡಾಯವಾಗಿ Online ಮೂಲಕವೇ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05.09.2024ಆಗಿರುತ್ತದೆ.

NMMS ಪರೀಕ್ಷೆಯ ಸಂಕ್ಷಿಪ್ತ ವಿವರ

ಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ (Local body schools) ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವುದು, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಮಾಧ್ಯಮಿಕ ಶಾಲಾ ಹಂತದಲ್ಲಿ ಶಾಲೆಯಿಂದ ಹೊರಗುಳಿಯದಂತೆ ತಡೆಯುವುದು ಮತ್ತು ಅವರ ವಿದ್ಯಾಭ್ಯಾಸದ ಮುಂದುವರಿಕೆಗೆ ಪ್ರೇರೇಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಸದರಿ ಪರೀಕ್ಷೆಯನ್ನು ಕನ್ನಡ, ಇಂಗ್ಲೀಷ್, ಉರ್ದು, ಮರಾಠಿ ಮತ್ತು ತೆಲುಗು ಮಾಧ್ಯಮಗಳಲ್ಲಿ ನಡೆಸುತ್ತಿದ್ದು, ಈ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ತಾಲ್ಲೂಕು ಕೇಂದ್ರಗಳಲ್ಲಿ ನಡೆಸಲಾಗುವುದು.

Eligibility

ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ (Local body schools) ಶಾಲೆಗಳಲ್ಲಿ 2024-25ನೇ ಸಾಲಿನಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ NMMS ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಸತಿಯುತ ಶಾಲೆಗಳ ವಿದ್ಯಾರ್ಥಿಗಳು NMMS ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. (ಉದಾ: ಮೊರಾರ್ಜಿ ದೇಸಾಯಿ, ಕಿತ್ತೂರುರಾಣಿ ಚೆನ್ನಮ್ಮ, ನವೋದಯ ಶಾಲೆ, ವಾಜಪೇಯಿ ಶಾಲೆ, ಏಕಲವ್ಯ, ಕೆ.ಜಿ.ಬಿ.ವಿ, ಅಂಬೇಡ್ಕರ್‌ ವಸತಿ ಶಾಲೆ ಇತ್ಯಾದಿ) ಹಾಗೆಯೇ ಕೇಂದ್ರೀಯ ವಿದ್ಯಾಲಯ, ಸೈನಿಕ ಶಾಲೆಗಳ ವಿದ್ಯಾರ್ಥಿಗಳು ಕೂಡ ಈ ಪರೀಕ್ಷೆಗೆ ಅರ್ಹರಿರುವುದಿಲ್ಲ. ಸರ್ಕಾರದಿಂದ ಅನುದಾನ ಪಡೆಯುವ ಯಾವುದೇ ಖಾಸಗಿ ಅನುದಾನಿತ ವಸತಿ ಶಾಲೆಗಳ ವಿದ್ಯಾರ್ಥಿಗಳು ಸಹ ಈ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಮಂಡಲಿ ಸೂಚನೆಯನ್ನು ಉಲ್ಲಂಘಿಸಿ ಅರ್ಜಿ ಸಲ್ಲಿಸಿದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಅವಕಾಶವಿರುವುದಿಲ್ಲ ಹಾಗೂ ಅಂತಹ ಶಾಲಾ ಮುಖ್ಯ ಶಿಕ್ಷಕರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು.

NMMS ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇರುವ ನಿಬಂಧನೆಗಳು

ಪರೀಕ್ಷೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ (Local body schools) ಶಾಲೆಗಳಲ್ಲಿ Regular ವಿದ್ಯಾರ್ಥಿಯಾಗಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ● ಅರ್ಜಿ ಸಲ್ಲಿಸಬೇಕಾದ ವಿದ್ಯಾರ್ಥಿಗಳು 7ನೇ ತರಗತಿ ಪರೀಕ್ಷೆಯಲ್ಲಿ ಸಾಮಾನ್ಯ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಶೇ.55 ರಷ್ಟು ಅಂಕಗಳನ್ನು ಅಥವಾ ತತ್ಸಮಾನ ಗ್ರೇಡ್ ಹಾಗೂ ಪ.ಜಾ ಮತ್ತು ಪ.ಪಂಗಡದ ವಿದ್ಯಾರ್ಥಿಗಳು ಶೇ.50 ರಷ್ಟು ಅಂಕಗಳನ್ನು ಅಥವಾ ತತ್ಸಮಾನ ಗ್ರೇಡ್ ಗಳಿಸಿರಬೇಕು. ಪೋಷಕರ ವಾರ್ಷಿಕ ವರಮಾನ ರೂ.3,50,000/- ಮೀರಿರಬಾರದು.

NMMS ಪರೀಕ್ಷೆಯ ಉದ್ದೇಶಗಳು

1) 8ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸುವುದು.

2) ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮುಂದುವರಿಕೆಗೆ ವಿದ್ಯಾರ್ಥಿ ವೇತನ ನೀಡುವುದು.

3) ಪ್ರತಿಭಾವಂತ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿಯದಂತೆ ತಡೆದು ಅವರ ವಿದ್ಯಾಭ್ಯಾಸ ಮುಂದುವರಿಕೆಗೆ ಪೇರೇಪಿಸುವುದು.

ಪತ್ರಿಕೆ-1- ಮಾನಸಿಕ ಸಾಮರ್ಥ್ಯ ಪರೀಕ್ಷೆ

( Mental Ability Test -MAT) ಈ ಪತ್ರಿಕೆಯಲ್ಲಿ 90 ಬಹು ಆಯ್ಕೆ ಪ್ರಶ್ನೆಗಳಿರುತ್ತವೆ. ಪ್ರತಿ ಪ್ರಶ್ನೆಗೂ ಒಂದು ಅಂಕದಂತೆ 90 ಅಂಕಗಳನ್ನು ನಿಗದಿಪಡಿಸಲಾಗಿದೆ. ಈ ಪ್ರಶ್ನೆಪತ್ರಿಕೆಯು ವಿದ್ಯಾರ್ಥಿಗಳು ಕಾರಣ ನೀಡುವ, ವಿಶ್ಲೇಷಿಸುವ, ಸಂಶ್ಲೇಷಿಸುವ ಇತ್ಯಾದಿ ಸಾಮರ್ಥ್ಯಗಳನ್ನು ಅಳೆಯುವ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

ಪತ್ರಿಕೆ-2-ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆ

(Scholastic Aptitude Test- SAT) ಈ ಪತ್ರಿಕೆಯಲ್ಲಿ 90 ಅಂಕಗಳಿಗೆ ಒಟ್ಟು 90 ಬಹು ಆಯ್ಕೆ ಪ್ರಶ್ನೆಗಳಿರುತ್ತವೆ. ಇವುಗಳಲ್ಲಿ 35 ಪ್ರಶ್ನೆಗಳು ವಿಜ್ಞಾನ (ಭೌತಶಾಸ್ತ್ರ, ರಸಾಯನ ಶಾಸ್ತ್ರ ಮತ್ತು ಜೀವಶಾಸ್ತ್ರ), 35 ಪ್ರಶ್ನೆಗಳು ಸಮಾಜ ವಿಜ್ಞಾನ (ಇತಿಹಾಸ, ಭೂಗೋಳ, ರಾಜ್ಯಶಾಸ್ತ್ರ ಅರ್ಥಶಾಸ್ತ್ರ, ಸಮಾಜಶಾಸ್ತ್ರ ಮತ್ತು ವ್ಯವಹಾರ ಅಧ್ಯಯನ) ಮತ್ತು 20 ಪ್ರಶ್ನೆಗಳು ಗಣಿತ ವಿಷಯಕ್ಕೆ ಸಂಬಂಧಿಸಿರುತ್ತವೆ.

2024-25 ನೇ ಸಾಲಿನ NMMS ಪರೀಕ್ಷೆಗೆ ನಿಗದಿಪಡಿಸಿರುವ ಪ್ರಶ್ನೆಪತ್ರಿಕೆಗಳ ಸ್ವರೂಪ

karnataka NMMS Notification
karnataka NMMS Notification

NMMS ಪರೀಕ್ಷೆಯ ಆಯ್ಕೆ ಪ್ರಕ್ರಿಯೆ (Selection Procedure)

ಈ ಪರೀಕ್ಷೆಯು ಎರಡು ಪ್ರಶ್ನೆಪತ್ರಿಕೆಗಳನ್ನು ಒಳಗೊಂಡಿದ್ದು, ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಎರಡೂ ಪತ್ರಿಕೆಗಳಲ್ಲಿ ಸರಾಸರಿ ಕನಿಷ್ಠ ಶೇ.40 ರಷ್ಟು ಅಂಕಗಳನ್ನು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಎರಡೂ ಪತ್ರಿಕೆಗಳಲ್ಲಿ ಸರಾಸರಿ ಕನಿಷ್ಠ ಶೇ.32 ರಷ್ಟು ಅಂಕಗಳನ್ನು ಪಡೆಯಬೇಕು. ಪ್ರತಿ ಜಿಲ್ಲೆಯಲ್ಲಿ ಪರೀಕ್ಷೆ ಬರದ ಒಟ್ಟು ವಿದ್ಯಾರ್ಥಿಗಳಲ್ಲಿ ವಿವಿಧ ಜಾತಿ/ವರ್ಗಗಳ ವಿದ್ಯಾರ್ಥಿಗಳನ್ನು ಚಾಲ್ತಿಯಲ್ಲಿರುವ ಮೀಸಲಾತಿ ಹಾಗೂ ಅರ್ಹತಾ ನಿಯಮಗಳ ಅನುಸಾರ Rank ಆಧರಿಸಿ DSERT ವತಿಯಿಂದ ಆಯ್ಕೆ ಮಾಡಲಾಗುವುದು.

8ನೇ ತರಗತಿಯಲ್ಲಿ ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಶೇ.55 ರಷ್ಟು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶೇ.50 ರಷ್ಟು ಅಂಕಗಳನ್ನು ಪಡೆದಿರಬೇಕು.

ವಿದ್ಯಾರ್ಥಿ ವೇತನ ವಿತರಣೆ

* ಈ ಪರೀಕ್ಷೆಯಲ್ಲಿ ಆಯ್ಕೆಯಾದವರಿಗೆ 9ನೇ ತರಗತಿಯಿಂದ ಮಾಸಿಕ ರೂ.1000/-ರಂತೆ ವರ್ಷಕ್ಕೆ ರೂ. 12,000/- ಗಳನ್ನು 4 ವರ್ಷಗಳವರೆಗೆ (ದ್ವಿತೀಯ ಪಿ.ಯು.ಸಿ ಯವರೆಗೆ) ವಿದ್ಯಾರ್ಥಿ ವೇತನವನ್ನು DoSEL ವತಿಯಿಂದ ನೀಡಲಾಗುವುದು. ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ DoSEL ನವದೆಹಲಿ ರವರು ಸಿದ್ಧಪಡಿಸಿರುವ ಎನ್.ಎಸ್.ಪಿ 2.0 ವೆಬ್ ಸೈಟ್ : www.scholorships.gov.in ನಲ್ಲಿ ವಿದ್ಯಾರ್ಥಿ ವೇತನಕ್ಕೆ 9ನೇ ತರಗತಿಯಿಂದ 12ನೇ ತರಗತಿವರೆಗೆ ಆನ್‌ಲೈನ್‌ನಲ್ಲಿ ಪ್ರತಿ ವರ್ಷವು ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ವಿದ್ಯಾರ್ಥಿ ವೇತನ ಮುಂದುವರಿಕೆಗೆ ನಿಬಂಧನೆಗಳು

NMMS ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮುಂದುವರಿಕೆಗೆ ಶೈಕ್ಷಣಿಕ ಹಿರಿಮೆಯನ್ನು ಕಾಯ್ದುಕೊಳ್ಳುವ ದೃಷ್ಟಿಯಿಂದ ಕೆಳಗಿನಂತೆ ನಿಬಂಧನೆಗಳನ್ನು ವಿಧಿಸಲಾಗಿರುತ್ತದೆ.

  • ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು 9 ಮತ್ತು 11ನೇ ತರಗತಿಗಳಲ್ಲಿ ಕನಿಷ್ಟ ಶೇ.55 ರಷ್ಟು ಮತ್ತು 10ನೇ ತರಗತಿಯಲ್ಲಿ ಕನಿಷ್ಟ ಶೇ.60 ರಷ್ಟು ಅಂಕಗಳನ್ನು ಗಳಿಸಬೇಕಾಗುತ್ತದೆ. ಪ.ಜಾತಿ/ಪ.ಪಂ ವಿದ್ಯಾರ್ಥಿಗಳಿಗೆ ಶೇ.5ರಷ್ಟು ವಿನಾಯಿತಿ ಇರುತ್ತದೆ.
  • ವಿದ್ಯಾರ್ಥಿವೇತನದ ಮುಂದುವರಿಕೆಗೆ ವಿದ್ಯಾರ್ಥಿಯು ಅಧ್ಯಯನ ನಡೆಸುತ್ತಿರುವ ತರಗತಿಯ ಫಲಿತಾಂಶ ಪ್ರಕಟವಾದ ನಂತರದ 3 ತಿಂಗಳ ಒಳಗಾಗಿ ಮುಂದಿನ ತರಗತಿಗೆ ದಾಖಲಾತಿ ಪಡೆಯುವುದು ಕಡ್ಡಾಯ.
  • ಆಯ್ಕೆಯಾದ ವಿದ್ಯಾರ್ಥಿಗಳು ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ (Local body schools) ಶಾಲೆ/ಕಾಲೇಜಿನಲ್ಲಿ ಮಾತ್ರ ತಮ್ಮ ವಿದ್ಯಾಭ್ಯಾಸ ಮುಂದುವರಿಸಬೇಕು.
  • ವಿದ್ಯಾರ್ಥಿಯು 9, 10 ಮತ್ತು 11ನೇ ತರಗತಿಯಲ್ಲಿ ಪ್ರಥಮ ಪ್ರಯತ್ನ (First Attempt) ದಲ್ಲೇ ತೇರ್ಗಡೆಯಾಗಬೇಕು
  • ವಿದ್ಯಾರ್ಥಿಗಳು ಯಾವುದಾದರೂ ಅರ್ಹರಾಗಿರುತ್ತಾರೆ. ಯೋಜನೆಯ ವಿದ್ಯಾರ್ಥಿ ವೇತನವನ್ನು ಮಾತ್ರ ಪಡೆಯಲು
  • ITI ಹಾಗೂ Diploma ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವವರು ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುವುದಿಲ್ಲ.
  • ವಿದೇಶಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುವುದಿಲ್ಲ.

NMMS ಪರೀಕ್ಷೆಯ ಅರ್ಜಿಯನ್ನು Online ಮೂಲಕ ಸಲ್ಲಿಸುವಾಗ ಮುಖ್ಯ ಶಿಕ್ಷಕರು ಗಮನಿಸಬೇಕಾದ ಅಂಶಗಳು

  1. ದಿನಾಂಕ: 13.09.2024ರಿಂದ NMMS ಪರೀಕ್ಷೆಗೆ Online ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:04.10.2024 ಆಗಿರುತ್ತದೆ.
  3. ಸದರಿ ಅರ್ಜಿಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ವೆಬ್‌ಸೈಟ್ Home page ನ NMMS Login ನಲ್ಲಿ ಲಭ್ಯವಿದ್ದು, ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು/ ಪ್ರಾಂಶುಪಾಲರೇ ತಮ್ಮ ಶಾಲೆಯ ವಿದ್ಯಾರ್ಥಿಗಳ ಅರ್ಜಿಯನ್ನು Online ಮೂಲಕ ಭರ್ತಿ ಮಾಡಲು ತಿಳಿಸಿದೆ.
  4. ಅರ್ಜಿ ಭರ್ತಿ ಮಾಡಲು ಸಹಾಯವಾಗುವಂತೆ USER Manual & Flow Chart ಅನ್ನು ಮಂಡಲಿಯ ವೆಬ್‌ಸೈಟ್‌ನಲ್ಲಿ ಲಭ್ಯ ಮಾಡಲಾಗಿರುತ್ತದೆ.
  5. ಶಾಲೆಯ ಮುಖ್ಯ ಶಿಕ್ಷಕರು NMMS ಪರೀಕ್ಷೆಗೆ Online ಮೂಲಕ ಅರ್ಜಿ ಸಲ್ಲಿಸುವಾಗ NMMS Login ನಲ್ಲಿ ಶಾಲೆಯ U- DISE ಕೋಡ್ ಬಳಸಿಯೇ Login ಆಗುವುದು ಕಡ್ಡಾಯವಾಗಿರುತ್ತದೆ. ಶಾಲೆಯ U-DISE ಕೋಡ್ ಅನ್ನೇ Usel, Name ಆಗಿ ಬಳಸಿ Login ಆಗುವುದು. ಮಂಡಲಿಯ ವತಿಯಿಂದ Default Password ನೀಡಲಾಗಿದ್ದು, ಮೊದಲ ಬಾರಿ ಲಾಗಿನ್ ಆಗುವಾಗ Password ಬದಲಾವಣೆ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ.

Important Links

CircularFlow chart for
Application
User manual
NMMSNMMSNMMS

Karnataka NMMS Home Page: Click Here

Share This Article

Choose Schools360 on Google

Schools 360

Content Writer